ದಲಿತ ಸಮುದಾಯಕ್ಕಾಗಿ ‘ಶುಭಲಗ್ನ’ ಯೋಜನೆ ಪ್ರಾರಂಭಿಸಿದ ರಾಜ್ಯಸರ್ಕಾರ
ಮಂಗಳೂರು : ದಲಿತ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಜಾರಿಗೊಳಿಸಲಿದ್ದು, ಶೀಘ್ರದಲ್ಲೇ ಪ್ರಾರಂಭವಾಗಲಿದೆ.
ಸಪ್ತಪದಿ ಮಾದರಿಯಲ್ಲೇ ‘ಶುಭಲಗ್ನ’ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ, ಉಪಜಾತಿಗಳ ಸಮಗ್ರ ವರದಿಯನ್ನು ತರಿಸಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಶುಭಲಗ್ನ ಘೋಷಣೆ ಆಗಲಿದೆ. ಶುಭಲಗ್ನ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಯಿಂದ ಎಸ್ ಸಿ ಸಮುದಾಯದ ಕುಟುಂಬಗಳಿಗೆ ವಿವಾಹವಾಗಲು ನೆರವಾಗಲಿದೆ.