IOCL Recruitment 2022 | ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 14

ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ತೈಲ ನಿಗಮ ನಿಯಮಿತ  ನೇಮಕಾತಿಯ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಕಾನೂನು ಪದವಿ, ಎಲ್‌ಎಲ್‌ಬಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :
ಭಾರತೀಯ ತೈಲ ನಿಗಮ ನಿಯಮಿತ  ನೇಮಕಾತಿಯ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ಮತ್ತು ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ :
ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿಯ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :
ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿಯ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ಲಾಟ್ ಪಿಜಿ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ :
ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿಯ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :
ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿಯ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ :ಜುಲೈ 21,2022 ರಿಂದ
ಅರ್ಜಿ ಸಲ್ಲಿಸಲು ಕೊನೆದಿನ :ಆಗಸ್ಟ್ 14,2022ರ ರಾತ್ರಿ 10 ಗಂಟೆಯೊಳಗೆ

ಅಧಿಕೃತ ವೆಬ್ ಸೈಟ್ : https://iocl.com/

Leave A Reply

Your email address will not be published.