Breaking ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಮಾರಕಾಸ್ತ್ರದಿಂದ ದಾಳಿ, ಪ್ರವೀಣ್ ಮೃತ್ಯು

ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿದೆ. ಇದು ಇದೀಗ ತಾನೇ ಬಂದ ಸುದ್ದಿ. ಈಗ ದಾಳಿಗೆ ಒಳಗಾದ ಪ್ರವೀಣ್ ಅವರು ದುರ್ಮರಣ ಹೊಂದಿದ್ದಾರೆ.

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಯತ್ನ ನಡೆಸಿದ ಬಗ್ಗೆ ವರದಿಯಾಗಿದೆ. ಸಾಮಾಜಿಕ ಕ್ಷೇತ್ರ ಸಕ್ರಿಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ಯಾರು, ಯಾಕೆ ದಾಳಿ ಮಾಡಿದ್ದಾರೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.

ರಾಜಕೀಯ ಕ್ಷೇತ್ರದಲ್ಲಿ ಪ್ರವೀಣ್ ಅವರು ಯುವನಾಯಕನಾಗಿ ಗುರ್ತಿಸಿಕೊಂಡಿದ್ದರು.

ಪ್ರವೀಣ್ ಅವರು ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದು ,ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಗೆ ಒಳಗಾದ ಕೂಡಲೇ ಪ್ರವೀಣ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆದರೆ ಇದು ಮಸೂದ್ ಹತ್ಯೆಗೆ ಪ್ರತಿಕಾರ ??

ಕೆಲದಿನಗಳ ಹಿಂದೆ ಬೆಳ್ಳಾರೆ ಸಮೀಪದ ಕಳಂಜದಲ್ಲಿ ಮಸೂದ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದು,ಇದಕ್ಕೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಯುವಕ‌ ಮಸೂದ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡ ಯುವಕನನ್ನು ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದ. ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18 ವರ್ಷ) ಮೃತ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕೊನೆಗೆ ಆತ ಮೃತಪಟ್ಟಿದ್ದ. ಆ ಕೊಲೆಗೆ ಇದು ಪ್ರತೀಕಾರ ಎನ್ನಲಾಗಿದೆ.

Leave A Reply