ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಫುಲ್ ಟೈಟ್ ಆಗಿ ಹೊರಳಾಡುತ್ತಿರುವ ವೀಡಿಯೋ ವೈರಲ್

ಶಿವಮೊಗ್ಗ: ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ‘ಖಾಲಿ ಕ್ವಾಟ್ರು ಬಾಟಲಿ ಹಂಗೆ ಲೈಫು’ ಎಂಬಂತೆ ಅಮಲಿನಲ್ಲಿ ತೇಲಾಡುತ್ತಾ ನೆಟ್ಟಗೆ ನಿಂತುಕೊಳ್ಳಲು ಆಗದೇ, ಕಾಲೇಜು ಗೇಟ್ ಮುಂದೆಯೇ ಹೊರಳಾಡುತ್ತಿರುವ ವಿಡಿಯೋ ವೈರಲ್ ಆಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಈ ಘಟನೆಯ ದೃಶ್ಯ ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. ವಿದ್ಯಾರ್ಥಿಯೊಬ್ಬ ಮುಖ ಕೆಳಗೆ ಮಾಡಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತಲೆ ಬಗ್ಗಿಸಿ ಕುಳಿತಿರುತ್ತಾನೆ. ಅವರ ಸ್ನೇಹಿತರು ಇಬ್ಬರನ್ನು ಸಂತೈಸುತ್ತಾರೆ. ಈ ವೇಳೆ ತಲೆ ಕೆಳಗೆ ಹಾಕಿಕೊಂಡು ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಎದ್ದು ಮುಂದಕ್ಕೆ ನಡೆಯುತ್ತಾನೆ. ಕೆಲವು ಹೆಜ್ಜೆ ಹಾಕುವಷ್ಟರಲ್ಲಿ ತೂರಾಡಿ ಕೆಳಗೆ ಬೀಳುತ್ತಾನೆ. ಇದೆ ವೇಳೆ ಅಲ್ಲಿಗೆ ಬಂದ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಲು ಯತ್ನಿಸುತ್ತಾರೆ. ಅದರೆ ಅವರ ಮಾತು ಕೇಳದೆ ತೂರಾಡುತ್ತಲೆ ವಿದ್ಯಾರ್ಥಿ ಓಡಲು ಯತ್ನಿಸುತ್ತಾನೆ.

ಪೊಲೀಸರು ಈಗಾಗಲೇ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯಿಂದ ಮಾಹಿತಿ ಕಲೆ ಹಾಕಿದ್ದು, ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ಕಾಲೇಜು ರಸ್ತೆಯಲ್ಲಿರುವ ಬಾರ್ ಗೆ ಹೋಗಿ ಮದ್ಯಪಾನ ಮಾಡಿ ಬಂದಿದ್ದಾರೆ. ಭದ್ರಾವತಿಗೆ ತೆರಳಲು ಕಾಲೇಜ್ ಬಸ್ ಹತ್ತಲು ಹೋದಾಗ ಅಮಲಿನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ ಎಂದು ವಿವರಿಸಿದ್ದಾರೆ.

ಕಾಲೇಜು ಕ್ಯಾಂಪಸ್ ಗಳಲ್ಲಿ ಗಾಂಜಾ, ಡ್ರಗ್ಸ್ ಪೂರೈಕೆಯಾಗುತ್ತಿರುವ ಕುರಿತು ಜಿಲ್ಲೆಯಲ್ಲಿ ಆತಂಕವಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮತ್ತಷ್ಟು ಮಾದಕ ವಸ್ತುಗಳು ವಿದ್ಯಾರ್ಥಿಗಳ ಕೈ ಸೇರುತ್ತಿರುವ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್ ನಲ್ಲಿ ತಡೆಯಲಾಗಿತ್ತು. ಬಳಿಕ ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಿ, ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದೆ ಎಂದಿದ್ದಾರೆ.

error: Content is protected !!
Scroll to Top
%d bloggers like this: