ಆಸ್ತಿ ನೋಂದಣಿ ಪ್ರಕ್ರಿಯೆ | ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸರಕಾರ

ರಾಜ್ಯದಲ್ಲಿ ಆಸ್ತಿ ನೋಂದಣಿಗೆ ನೀಡಿದ ಶೇ.10ರಷ್ಟು ರಿಯಾಯಿತಿಯನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.

 

ಇನ್ನು ‘ಆಸ್ತಿ ನೋಂದಣಿಯ ಸಂದರ್ಭದಲ್ಲಿ ಸರ್ವರ್ ಎದುರಾಗಿದ್ದು, ಈ ಕುರಿತು ದೂರುಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ತೀರ್ಮಾನಿಸಲಾಗಿದ್ದು, 406 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನ ಕಂಪ್ಯೂಟರೀಕರಣಗೊಳಿಸಲು ನಿರ್ಧರಿಸಲಾಗಿದೆ’ ಎಂಬ ಮಾಹಿತಿಯನ್ನು ತಿಳಿಸಿದರು.

ಇನ್ನು ‘ಈ ವರ್ಷದ ಮೊದಲ ಮೂರು ತಿಂಗಳುಗಳಲ್ಲಿ ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಐದೂವರೆ ಸಾವಿರ ಕೋಟಿ ರೂಪಾಯಿಗಳಷ್ಟು ಆದಾಯ ಸಂಗ್ರಹವಾಗಿದೆ. ಅದ್ರಂತೆ, ಕಂದಾಯ ಇಲಾಖೆಗೆ ಈ ವರ್ಷದ ಬಜೆಟ್’ನಲ್ಲಿ ಆಸ್ತಿ ನೋಂದಣಿಯ ಮೂಲಕ 14 ಸಾವಿರ ಕೋಟಿ ರೂ. ಸಂಗ್ರಹಿಸಲು ನಿರ್ಧರಿಸಿತ್ತು. ಆದ್ರೆ, ಈ ಪ್ರಮಾಣವನ್ನ ನಾವು ಅಧಿಕಾರಿಗಳ ಜತೆ ಚರ್ಚಿಸಿ 15 ಸಾವಿರ ಕೋಟಿ ರೂ. ಏರಿಸಿದೆವು ‘ ಎಂದು ಹೇಳಿದರು.

ಇನ್ನು ನೋಂದಣಿಯಲ್ಲಿ ರಿಯಾಯಿತಿ ನೀಡಿದ್ದರಿಂದ ರಾಜ್ಯದ ಬೊಕ್ಕಸಕ್ಕೆ ಹಣ ಹರಿದು ಬರುತ್ತಿದ್ದು, ನಿರೀಕ್ಷೆ ಮೀರಿ ಆದಾಯ ಸಂಗ್ರಹವಾಗಿದೆ’ ಎಂದರು.

Leave A Reply

Your email address will not be published.