ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ | ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

Share the Article

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲಗೊಂಡಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು ಡಿಜಿಪಿ ಅಥವಾ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಈ ಹತ್ಯೆಯ ಹಿಂದೆ ಯಾರಿದ್ದಾರೆ ಎಂದು ಹೇಳಬೇಕು. ಈ ಹತ್ಯೆಯ ಹಿಂದೆ ರಾಜಕೀಯ ಕಾರಣ ಇದೆಯೋ ಅಥವಾ ವೈಯಕ್ತಿಕ ಕಾರಣ ಇದೆಯೋ ಎಂಬುವುದನ್ನು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಒತ್ತಾಯ ಮಾಡಿದ್ದಾರೆ. ಹತ್ಯೆ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಹಾಗೂ ಸರ್ಕಾರ ವಿಫಲವಾಗಿದೆ ಎಂಬ ಮಾತನ್ನು ಈ ಸಂದರ್ಭದಲ್ಲಿ ಹೇಳಿದ್ದಾರೆ.

Leave A Reply

Your email address will not be published.