ಪುತ್ತೂರು : ಪ್ರವೀಣ್ ನೆಟ್ಟೂರು ಹತ್ಯೆ ಪ್ರಕರಣ, ತುರ್ತು ಸಭೆ ಕರೆದ ಸಿಎಂ

ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ.

ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ ನಡೆಯಲಿದ್ದು ಗೃಹಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತುರ್ತುಸಭೆಯಲ್ಲಿ ಚರ್ಚೆ ನಡೆಯಲಿದೆ.

Leave A Reply