ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.
ಪ್ರವೀಣ್ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
You must log in to post a comment.