ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ!! ಜುಲೈ 28ರಂದು ದಕ ಜಿಲ್ಲೆ ಬಂದ್ ಗೆ ಕರೆ ನೀಡಿಲ್ಲ-ಬಜರಂಗದಳ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಬಂದ್‌ಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಿಂದೂ ಜಾಗರಣ ವೇದಿಕೆ ವತಿಯಿಂದ ಜಂಟಿ ಕರೆ ಕೊಟ್ಟಿದೆ ಎಂಬ ಸುಳ್ಳು ಸುದ್ದಿಯೊಂದು ಹರಡಿದೆ.

“ನಾಳೆ 28/07/2022 (ಗುರುವಾರ)ದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಬಂದ್‌ಗೆ ಕರೆ ನೀಡಿದೆ. ಸಮಸ್ತ ಶಾಲೆ ಕಾಲೇಜು ಹೋಟೆಲ್ ಅಂಗಡಿ ಗೂಡಂಗಡಿ ಬಂದ್ ಮಾಡಲು ಕರೆ ನೀಡಲಾಗಿದ್ದು, ವಾಹನಸವಾರರು ಕೂಡ ಬಂದ್ ಗೆ ಸಮೇತವಾಗಿ ಸ್ವಯಂ ಪ್ರೇರಿತರಾಗಿ ಬಂದ ಮಾಡಲು ಮನವಿ ಮಾಡಲಾಗಿದೆ” ಎಂಬ ಮಾಹಿತಿಯೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದೆ.

ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಬಂದ್‌ಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಿಂದೂ ಜಾಗರಣ ವೇದಿಕೆ ವತಿಯಿಂದ ಯಾವುದೇ ಕರೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದೆ.

Leave A Reply