ನಾವು ತಿರುಗಿ ಬಿದ್ರೆ ಒಬ್ಬ ಮುಸಲ್ಮಾನ್ ಇರಬಾರದು -ಪ್ರಮೋದ್ ಮುತಾಲಿಕ್ ಹೇಳಿಕೆ | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನೆಲೆ
ಧಾರವಾಡ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ, ಎಲ್ಲೆಡೆ ಪ್ರತಿಭಟನೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಪ್ರವೀಣ್ ಹತ್ಯೆ ಖಂಡಿಸಿ ಶ್ರೀರಾಮ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿ ʻಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದುʼ ಪ್ರತಿಕ್ರಿಯಿಸಿದ್ದಾರೆ.
ಸ್ವಯಂ ರಕ್ಷಣೆ ಹಿಂದೂ ಸಂಘಟನೆ ಮುಂದಾಗಬೇಕಾಗಿದ್ದು, ಸರ್ಕಾರ ಬೇಗನೇ ಎಸ್ಪಿಐ, ಪಿಎಫ್ಐ ಸಂಘಟನೆಗಳನ್ನುಕೂಡಲೇ ನಿಷೇಧ ಮಾಡಿ. ನಾನೂ ಮುಸ್ಲಿಂ ಸಮೂದಾಯಕ್ಕೆ ಹೇಳುತ್ತಿದ್ದೇನೆ “ಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ ಇರಬಾರದಂತೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.
ವಾರದ ಹಿಂದೆ ಕೊಲೆ ನಡೆಸಿದ್ದಕ್ಕಾಗಿ ಸೇಡಿನ ಹತ್ಯೆ ಎನ್ನಲಾಗುತ್ತಿದ್ದೂ, ಪ್ರವೀಣ್ ಹತ್ಯೆ ಹಿಂದೆ ಕೇರಳ ಮೂಲದ ದುಷ್ಕರ್ಮಿಗಳ ನಂಟಿದೆ. ಇಂಥಹ ಕ್ರೌರ್ಯವನ್ನು ಹದ್ದು ಬಸ್ತಿನಲ್ಲಿಡುವ ಕೆಲಸ ಆಗಬೇಕು. ಇಲ್ಲದೇ ಹೋದಲ್ಲಿ ಮತ್ತಷ್ಟು ಹಿಂದೂಗಳು ಬಲಿಯಾಗುತ್ತಾರೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಹದ್ದಿನ ಕಣ್ಣು ಎಲ್ಲಿದೆ? ಸರ್ಕಾರದ ಬಿಗಿಯಾದ ಕ್ರಮ ಇಲ್ಲ. ಇದೇ ಕಾರಣಕ್ಕೆ ಹತ್ಯೆ ನಡೆಯುತ್ತಿದೆ. ಮೋದಿ ಮತ್ತು ಯೋಗಿ ಮಾದರಿಯಲ್ಲಿ ಗಟ್ಸ್ ಇಲ್ಲ. ಆ ಧೈರ್ಯ, ಮಾನಸಿಕತೆ ಇವರಿಗೆ ಇಲ್ಲ. ಆ ನೈತಿಕತೆಯೂ ಇವರಿಗೆ ಇಲ್ಲ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಅವರು, ಈ ಕ್ರೌರ್ಯ ಹದ್ದುಬಸ್ತಿನಲ್ಲಿಡೋ ಕಾರ್ಯ ಸರ್ಕಾರ ಕೂಡಲೇ ಮಾಡಬೇಕು. ಇಲ್ಲದೇ ಹೋದಲ್ಲಿ ಇನ್ನೂ ಸಾಕಷ್ಟು ಹಿಂದೂಗಳ ಬಲಿಯಾಗತ್ತೇ ಅನಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ವಿಫಲ ಆಗುತ್ತಿದೆ. ಕೊಲೆ, ಹಲ್ಲೆ ಗಲಾಟೆಯಾದಾಗ ಉಗ್ರವಾದ ಹೇಳಿಕೆಗಳು ಬರುತ್ತವೆ. ಆದರೆ ಮುಂದೆ ಏನು ಎಂದು ಪ್ರಶ್ನಿಸಿದರು.
ಕೊಲೆಗೆ ಕೊಲೆಯೇ ಉತ್ತರ ಅಲ್ಲ, ನ್ಯಾಯಕ್ಕೆ ನ್ಯಾಯಾಲಯಇದೆ. ಪೊಲೀಸ್ ಠಾಣೆ ಇದೆ. ಸಂವಿಧಾನಬದ್ಧವಾದಹೋರಾಟಕ್ಕೆ ಅವಕಾಶಇದೆ. ಮುಲ್ಲಾ ಮೌಲ್ವಿಗಳುಎಸ್ಡಿಪಿಐ, ಪಿಎಫ್ಐ ಹದ್ದುಬಸ್ತಿನಲ್ಲಿಡಬೇಕು. ಶಾಂತಿಸೌಹಾರ್ದತೆ ಬೇಕಾದರೆ ಹದ್ದುಬಸ್ತಿನಲ್ಲಿಡಿ. ಇಲ್ಲದೇ ಹೋದಲ್ಲಿ ಹಿಂದೂ ಸಮಾಜ ತಿರುಗಿ ಬೀಳುತ್ತೆ. ಸ್ವಯಂ ರಕ್ಷಣೆಗೆ ಹಿಂದೂಸಮಾಜ ಸಿದ್ಧವಾಗಬೇಕಿದೆ. ಇಲ್ಲದೇ ಹೋದಲ್ಲಿ ಸರ್ಕಾರ,ಬಿಜೆಪಿ, ಕಾನೂನು ಏನೂ ಮಾಡಲು ಆಗುವುದಿಲ್ಲ ಎಂದುಮುತಾಲಿಕ್ ಗರಂ ಆದರು.ಮುಸ್ಲಿಂ ವೋಟ್ಗಾಗಿ ಸ್ವಲ್ಪ ಅಲ್ಲಾಡ್ತಾ ಇದ್ದಾರೆ.
ದಕ್ಷಿಣ ಕನ್ನಡಜಿಲ್ಲೆ ಬಿಜೆಪಿಯ ಭದ್ರಕೋಟೆ. ಶಿವಮೊಗ್ಗ ಬಿಜೆಪಿಯ ಭದ್ರಕೋಟೆ. ಅವರ ಭದ್ರಕೋಟೆಯಲ್ಲೇ ಹೊಕ್ಕು ಹೊಡಿತಾಇದ್ದಾರೆ. ಹಾಗಾದರೆ ಭದ್ರಕೋಟೆ ಛಿದ್ರವಾಗುತ್ತಿದೆಯಲ್ಲ?.ಹಿಂದೂಗಳ ಕೊಲೆಮಾಡಿದರೂ ಏನೂ ಮಾಡಲುಆಗೋದಿಲ್ಲ ಎಂಬ ಸಂದೇಶ ಕೊಡುತ್ತಿದ್ದಾರೆ ಎಂದು ಹೇಳಿದರು.