ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪುತ್ತೂರು, ಸುಳ್ಯ, ಕಡಬ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಜು.27 ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿದೆ.

ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆ ನಾಳೆ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು., ಈ ಕೃತ್ಯಕ್ಕೆ ಪ್ರೇರಣೆ ನೀಡಿದಂತಹ ಪಿ. ಎಫ್. ಐ. ಎಸ್. ಡಿ.ಪಿ. ಐ ನಾಯಕರನ್ನು ಬಂಧಿಸಬೇಕು, ಅಷ್ಟೇ ಅಲ್ಲದೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

ಘಟನೆ ಹಿನ್ನೆಲೆ

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿರುವ ಅಕ್ಷಯ ಚಿಕನ್ ಸೆಂಟರ್ ಮಾಲಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ದುಷ್ಕರ್ಮಿಗಳಿಬ್ಬರು ಕತ್ತಿಯಿಂದ ಕಡಿದ ಪರಿಣಾಮ ತೀವ್ರ ಗಾಯಗೊಂಡಿರುವ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಜು.26ರಂದು ರಾತ್ರಿ 8.20 ರಿಂದ 8.45 ರ ನಡುವೆ ಈ ಘಟನೆ ನಡೆದಿದೆ. ಪ್ರವೀಣ್‌ರವರು ತನ್ನ ಅಂಗಡಿಯಲ್ಲಿ ಕುಳಿತುಕೊಂಡಿದ್ದ ವೇಳೆ ಕೆಎಲ್ ನಂಬರಿನ ಬೈಕ್‌ನಲ್ಲಿ ಬಂದಿದ್ದ ಈರ್ವರು ದುಷ್ಕರ್ಮಿಗಳು ಅಲ್ಲಿಗೆ ಬಂದಿದ್ದರು. ಇದನ್ನು ಗಮನಿಸಿದ ಪ್ರವೀಣ್‌ರವರು ತಪ್ಪಿಸಿಕೊಳ್ಳಲೆಂದು ಪಕ್ಕದ ಅಂಗಡಿಗೆ ಹೋಗುತ್ತಿದ್ದ ವೇಳೆಯೇ ಹಿಂದಿನಿಂದ ಬಂದು ಅವರ ತಲೆಗೆ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ.

ಇದರಿಂದಾಗಿ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್‌ರವರನ್ನು ಕೂಡಲೇ ಅಲ್ಲಿಂದ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆಂದು ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಯಾಕಾಗಿ ನಡೆಯಿತು ಎಂಬುದು ನಿಗೂಢವಾಗಿದೆಯಾದರೂ ಕೆಲ ದಿನಗಳ ಹಿಂದೆ ಕಳೆಂಜ ವಿಷ್ಣುನಗರದಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಸುದ್ದಿ ಹರಡಿದೆ. ಘಟನೆಯಿಂದಾಗಿ ಬೆಳ್ಳಾರೆಯಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಈಗಾಗಲೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

error: Content is protected !!
Scroll to Top
%d bloggers like this: