ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿಸಿದೆ. ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದಾರೆ. ಈಗ ಎಲ್ಲೆಡೆ ಹತ್ಯೆ ಖಂಡಿಸಿ ಜನ ಧಿಕ್ಕಾರ ಕೂಗುತ್ತಿದ್ದಾರೆ.
ಈ ಘಟನೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ,” ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ” ಎಂದು ಒತ್ತಾಯಿಸಿದ್ದಾರೆ.
ಮಂಗಳೂರಿಗೆ ಎಡಿಜಿಪಿ ಅಲೋಕ್ ಕುಮಾರ್
ಪ್ರವೀಣ ಹತ್ಯೆಯ ತನಿಖೆಗಾಗಿ ADGP ಅಲೋಕ್ ಕುಮಾರ್ ಮಂಗಳೂರಿಗೆ ವಿಮಾನದ ಮೂಲಕ ಬಂದು ನಂತರ ಸುಳ್ಯಕ್ಕೆ ಆಗಮಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸುಳ್ಯಕ್ಕೆ ಬಂದು ಬೆಳ್ಳಾರೆಯ ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಎರಡು ದಿನಗಳಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಇರಲಿದ್ದಾರೆ.
You must log in to post a comment.