ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | 4 ತಾಲೂಕುಗಳಲ್ಲಿ ಮದ್ಯ ಮಾರಾಟ ಬಂದ್ – ಜಿಲ್ಲಾಡಳಿತ ಆದೇಶ

ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಲ್ಲಿಸಿದೆ. ಜಿಲ್ಲೆಯ 4 ತಾಲೂಕುಗಳಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಮದ್ಯ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

 

ಪ್ರವೀಣ್ ಹತ್ಯೆಯಿಂದಾಗಿ ಜಿಲ್ಲೆಯಾದ್ಯಂತ ಕೆಂಡ ಮುಚ್ಚಿದ ವಾತಾವರಣ ಉಂಟಾಗಿದೆ‌. ಪರಿಸ್ಥಿತಿ ತುಂಬಾ ಸೂಕ್ಷ್ಮವಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಜು.29 ರಾತ್ರಿ 12 ಗಂಟೆವರೆಗೆ ಬಂದ್‌ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ, ಗುರುವಾರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಋಷಿಕೇಶ್ ಸೋನಾವಣೆ, ಆರೋಪಿಗಳು ಸವಣೂರು ಗ್ರಾಮದ 29 ವರ್ಷದ ಜಾಕೀರ್ ಮತ್ತು ಬೆಳ್ಳಾರೆ ಗ್ರಾಮದ 27 ವರ್ಷದ ಮೊಹಮ್ಮದ್ ಶಫೀಕ್ ಎಂದು ಹೇಳಿದ್ದು, ಈ ಪ್ರಕರಣ ಸಂಬಂಧ ಈಗಾಗಲೇ 15 ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದಿದ್ದಾರೆ.

Leave A Reply

Your email address will not be published.