ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿದ ಬಿ.ವೈ. ವಿಜಯೇಂದ್ರ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಸಚಿವರು ಪ್ರವೀಣ್ ಮನೆಗೆ ಭೇಟಿ ನೀಡುತ್ತಿದ್ದಾರೆ.

ಇಂದು ಮಧ್ಯಾಹ್ನ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದ್ದಾರೆ. ಪ್ರವೀಣ್ ಹತ್ಯೆಯಿಂದ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಪ್ರವೀಣ್ ಅವರ ಪತ್ನಿ ನೂತನಾ ಹಾಗೂ ಮನೆಯವರೊಂದಿಗೆ ಮಾತನಾಡಿ, ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗಕೊಡಿಸುವ ಭರವಸೆ ನೀಡಿದ್ದಾರೆ. ಅಲ್ಲದೇ ಮಾಧ್ಯಮದವರೊಂದಿಗೆ ಮಾತನಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆ ನೀಡಿದರು.

ಈ ವೇಳೆ ಸಚಿವ ಎಸ್.ಅಂಗಾರ, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮೊದಲಾದವರು ಇದ್ದರು. ಈ ವೇಳೆ ಕುಟುಂಬಸ್ಥರು ಆರೋಪಿಗಳಿಗೆ ಜಾಮೀನು ಕೊಡಬೇಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Leave A Reply