ಪುತ್ತೂರು: ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರಿಂದ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳೊಂದಿಗೆ ಸಹಕರಿಸಿದ್ದಾರೆ ಎನ್ನುವ ಆಧಾರದಲ್ಲಿ ಜುಲೈ 28ರಂದು ಪ್ರವೀಣ್ ಹತ್ಯೆ ಪ್ರಕರಣದ ವಿಶೇಷ ತನಿಖಾ ತಂಡ ಸುಮಾರು 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದು, ಅವರಲ್ಲಿ ಬೆಳ್ಳಾರೆಯ ಶಫಿಕ್ ಹಾಗೂ ಸವನೂರಿನ ಝಾಕೀರ್ ಎಂಬಿಬ್ಬರನ್ನು ವಿಚಾರಣೆಯ ಬಳಿಕ ಬಂಧಿಸಲಾಗಿತ್ತು. ಸದ್ಯ ಇಬ್ಬರು ಆರೋಪಿಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಧೀಶ ಗೌಡ ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಮುಂದಿನ ವಿಚಾರಣೆ ಆಗಸ್ಟ್ 11ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
You must log in to post a comment.