ಪ್ರವೀಣ್ ನೆಟ್ಟಾರು ಮನೆಗೆ ಬಿ.ವೈ.ವಿಜಯೇಂದ್ರ ಭೇಟಿ

0 14

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಕುಟುಂಬಸ್ಥರ ಆಕ್ರಂದನದ ನಡುವೆಯೇ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿನ್ನೆ ಸಂಜೆ ಸ್ವಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಇದೀಗ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದ್ದಾರೆ.

ಬೆಳಗ್ಗೆ ಹತ್ತು ಗಂಟೆಗೆ ಬೆಂಗಳೂರಿನಿಂದ ತೆರಳಲಿದ್ದ ಇವರು, ಇದೀಗ ನೆಟ್ಟಾರು ತಲುಪಿ ಮೃತ ಪ್ರವೀಣ್ ನಿವಾಸಕ್ಕೆ ತೆರಳಿದ್ದಾರೆ. ಮನೆಯವರೊಂದಿಗೆ ಮಾತಾಡಿ, ಪ್ರವೀಣ್ ಹತ್ಯೆಯಿಂದ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Leave A Reply