ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪರಿಸ್ಥಿತಿ ಬಿಗಾಡಿಯಿಸಿದ್ದ ಕಾರಣ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು, ಇದೀಗ ಇದರ ಅವಧಿ ಮುಂದುವರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಐದು ತಾಲೂಕುಗಳಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಈ ಹಿಂದೆ ಜು.27 ರಂದು ಹೊರಡಿಸಿದ್ದ ನಿಷೇಧಾಜ್ಞೆಯ ಅವಧಿ ಇಂದು ಮಧ್ಯರಾತ್ರಿ 12ಕ್ಕೆ ಮುಕ್ತಾಯಗೊಳ್ಳಲಿರುವುದರಿಂದ ನಿಷೇಧಾಜ್ಞೆ ಅವಧಿಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

You must log in to post a comment.