ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್, ಸುಬ್ರಹ್ಮಣ್ಯಕ್ಕೆ ಮಂಜುನಾಥ್

ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.

 

ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಅದಲ್ಲದೇ ಈ ಹಿಂದೆ ಬೆಳ್ಳಾರೆ ಠಾಣಾ ಎಸ್ ಐ ಆಗಿದ್ದ ರುಕ್ಮ ನಾಯ್ಕ್, ಸುಬ್ರಹ್ಮಣ್ಯ ಠಾಣಾ ಎಸ್ ಐ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವರ್ಗಾವಣೆ ಗೊಂಡಿರುವ ಪೊಲೀಸ್ ಅಧಿಕಾರಿಗಳು ಕೂಡಲೇ ಸೂಚಿಸಿದ ಠಾಣೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿದ್ದು, ಠಾಣಾ ವ್ಯಾಪ್ತಿಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಬದಲಾವಣೆಯಾಗಿದೆ ಎನ್ನಲಾಗಿದೆ.

ರುಕ್ಮ ನಾಯ್ಕ್
ಜಂಬೂರಾಜ್

Leave A Reply

Your email address will not be published.