ಯಲ್ಲೋ ಅಲರ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
ವರುಣನ ಕೃಪೆ ಮತ್ತೆ ರಾಜ್ಯದಲ್ಲಿ ಬಿರುಸುಗೊಂಡಿದೆ. ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕರಾವಳಿ, ಮಲೆನಾಡಿನ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮೂನ್ಸೂಚನೆ ನೀಡಿದೆ.
ಒಂದು ವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ರಾಜ್ಯದಲ್ಲಿ ಶೇ.48 ಮಳೆ ಕೊರತೆಯಾಗಿದೆ. ಜು.22ರಿಂದ ಜು.28ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 63 ಮಿಮೀ ಮಳೆಯಾಗಬೇಕಿತ್ತು. ಆದರೆ, 33 ಮಿಮೀ ಮಿಮೀ ಮಳೆಯಾಗಬೇಕಿತ್ತು. ಆದರೆ, 33 ಮಿಮೀ ಮಳೆಯಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಪ್ ಸರಾಸರಿ ಶೇ.70 ಮಳೆ ಕಡಿಮೆಯಾಗಿದೆ.
ಆದರೆ ನಿನ್ನೆಯಿಂದ ಮಳೆ ಮತ್ತೆ ಪ್ರಾರಂಭವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜು.29ರಿಂದ ಆ.1ರವರೆಗೆ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಜು.29 ಮತ್ತು 31ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಮಕೂರು ಮತ್ತು ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇದ್ದ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.