KPSC ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ನಿನ್ನೆ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ದು, ನಿನ್ನೆ ಪ್ರಕಟವಾಗಿದೆ. ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ.
ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ 2020ರ ಆಗಸ್ಟ್ 24ರಂದು ನಡೆದಿತ್ತು. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆ 1.20 ಅನುಪಾತದಲ್ಲಿ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಪರೀಕ್ಷೆ ಬರೆದಿದ್ದರು. ಇದೀಗ ಸಂದರ್ಶನಕ್ಕೆ 1:3 ಅನುಪಾತದಲ್ಲಿ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಪ್ರಕಟಿಸಿದೆ.
ಅರ್ಹರಾದ 318 ಅಭ್ಯರ್ಥಿಗಳ ಅರ್ಹತಾ ಪಟ್ಟಿ ಇಲ್ಲಿದೆ :