ಮಂಗಳೂರು : ಪಾಝಿಲ್ ಹತ್ಯೆ ಪ್ರಕರಣ,13 ಜನರ ವಿಚಾರಣೆ

ಮಂಗಳೂರು : ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ಯುವಕನೋರ್ವನನ್ನು ಅಟ್ಟಾಡಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿತ್ತು. ಮೃತ ಯುವಕ ಫಾಝಿಲ್ ಮಂಗಳಪೇಟೆ ನಿವಾಸಿ. ಈಗ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನು ಕೂಡ ವಿಚಾರಣೆ ಮಾಡಲಾಗುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದಿದ್ದಾರೆ.

ಈಗಾಗಲೆ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಅಷ್ಟು ಮಾತ್ರವಲ್ಲದೇ ರಾತ್ರಿ 10 ಗಂಟೆ ನಂತರ ಸಂಚರಿಸುವ ಎಲ್ಲಾ ವಾಹನಗಳ ತಪಸಣೆ ಮಾಡಲಾಗುತ್ತಿದೆಯಂತೆ. ಕಮೀಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಮಧ್ಯ ಮಾರಾಟ ನಿಷೇಧ ಮಾಡಲಾಗಿದೆ. ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವಂತಿಲ್ಲ. ಯಾವುದೇ ಅಹಿತಕರ ಘಟನೆಗಳು ನಡಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.