ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಯಲ್ಲಿ ಪ್ರಾರ್ಥನೆ ಬೇಡ- ಪೊಲೀಸರ ಮನವಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ಮಂಗಳೂರಿನ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ.

ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಶುಕ್ರವಾರ ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

ಫಾಜಿಲ್​ ಮಂಗಲಪೇಟೆ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್​ ಹಾಕಲಾಗಿದ್ದು, ಸುರತ್ಕಲ್​ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

error: Content is protected !!
Scroll to Top
%d bloggers like this: