ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಇದೀಗ ಬಂದ ಸುದ್ದಿ. ಪೊಲೀಸರು ಮೂರನೆಯ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಜಾಡು ಹಿಡಿದು ಹೋದ ಪೊಲೀಸರಿಗೆ ಮಹತ್ವದ ಸಿಕ್ಕಿದೆ. ಮೂರನೆಯ ಆರೋಪಿಯನ್ನು ಪೊಲೀಸರು ಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯ ಆಗಿದೆ. ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶಪಡಿಸಿಕೊಂಡ ಬಗ್ಗೆ ಮಾಹಿತಿಯಿದೆ. ಆರೋಪಿಗಳು ಕೇರಳಕ್ಕೆ ಓಡಿ ಹೋಗಿದ್ದಾರೆ ಎಂಬ ಅನಿಸಿಕೆಗಳ ನಡುವೆಯೂ ಮೂವರು ಪ್ರಮುಖ ಆರೋಪಿಗಳ ಬಂಧನ ಆಗಿದೆ.
ಸದ್ದಾಂ ಎಂಬಾತ ಚಿಕನ್ ಶಾಪ್ ಹೊಂದಿದ್ದಾನೆ ಎಂಬ ಮಾಹಿತಿ ಲಭ್ಯ ಆಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೂಡಾ ಚಿಕನ್ ಸೆಂಟರ್ ನಡೆಸುತ್ತಿದ್ದರು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.
ನಿನ್ನೆ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
You must log in to post a comment.