ಪ್ರವೀಣ್ ನೆಟ್ಟಾರ್ ಅವರು ನಿಜಕ್ಕೂ ನಳಿನ್ ಕುಮಾರ್ ಕಟೀಲ್ ಅವರ ಕಾರು ಚಾಲಕ ಆಗಿದ್ರಾ ? ಹೌದು ಅಂತಿದ್ದಾರೆ ವಿಪಕ್ಷ ನಾಯಕ ಸಿದ್ದರಾಮಯ್ಯ !

ಬೆಂಗಳೂರು: ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರ್ ಹಾಗೂ ಫಾಜಿಲ್ ಹತ್ಯೆ ಘಟನೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರ ನಡುವೆ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಮೃತ ಪ್ರವೀಣ್ ನೆಟ್ಟಾರ್ ಹತ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ ಒಂದು ವಿಷ್ಯ ಈಗ ಚರ್ಚೆಯಲ್ಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪ್ರವೀಣ್ ನೆಟ್ಟಾರ್ ಕಾರು ಚಾಲಕನೂ ಆಗಿದ್ದರಂತೆ. ಹಾಗಂತ ಸಿದ್ದರಾಮಯ್ಯನವರು ಪತ್ತೆದಾರಿಕೆ ಮಾಡಿ ಪತ್ತೆ ಮಾಡಿದ್ದಾರೆ. “ಪ್ರವೀಣ್ ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ( ಕಟೀಲ್) ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆ ನೆರವಾದೀತು” ಎಂದಿದ್ದಾರೆ.

ಪ್ರವೀಣ್ ನೆಟ್ಟಾರ್ ಅವರು ನಿಜಕ್ಕೂ ನಳಿನ್ ಕುಮಾರ್ ಕಟೀಲ್ ಅವರ ಕಾರು ಚಾಲಕ ಆಗಿದ್ರಾ ಎಂಬ ಬಗ್ಗೆ ಈಗ ದಕ್ಷಿಣ ಕನ್ನಡದಲ್ಲಿ ಚರ್ಚೆ ಶುರುವಾಗಿದೆ.

ಈಗ ಹಿಂದೂಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರದೆ ಬರದೆ ಮುಚ್ಚಿ ಹೋಗುತ್ತಿದೆ. ಹತ್ಯೆ ನಡೆಸಿರುವ ದುರ್ಷ್ಕಮಿಗಳು ಯಾವುದೇ ಜಾತಿ, ಧರ್ಮ, ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು ಎಂದು ಸಿದ್ದು ಅವು ಒತ್ತಾಯಿಸಿದ್ದಾರೆ. ಆ ಮೂಲಕ ಸರ್ಕಾರ ತನಿಖೆ ಸರ್ಯಾಗಿ ಮಾಡ್ತಿಲ್ಲ ಎಂದಿದ್ದಾರೆ. ಈ ಮೂಲಕ, ಎಂದಿನಂತೆ ತನಿಖಾ ಪ್ರೋಸೆಸ್ ಗೆ ಕೂಡಾ ರಾಜಕೀಯದ ಹೊಲಸು ಬಡಿದಿದೆ.

ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘಟನೆಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಸರ್ಕಾರ ತೋರಬೇಕು, ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿ ಸರ್ಕಾರ ಉಳಿಸಿಕೊಳ್ಳಲಿಕ್ಕಾಗಿ ಆರ್ ಎಸ್ ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Leave A Reply

Your email address will not be published.