ಅಹಿತಕರ ಘಟನೆಗಳ ಹಿನ್ನೆಲೆ!! ಸಂಜೆಯಾಗುತ್ತಲೇ ಅಂಗಡಿ-ಮುಂಗಟ್ಟುಗಳ ಮುಚ್ಚಲು ಆದೇಶ!! ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ
ಮಂಗಳೂರು: ಜಿಲ್ಲೆಯಲ್ಲಿ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ಆಗಸ್ಟ್ ಒಂದರ ವರೆಗೆ ಸಂಜೆ ಆರು ಗಂಟೆಯ ಬಳಿಕ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದು ವ್ಯಾಪಾರ ವಹಿವಾಟು ನಡೆಸದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದೆರಡು ವಾರಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆ, ಗಲಭೆಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಅದಲ್ಲದೇ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇನ್ನಷ್ಟು ಆರೋಪಿಗಳ ಬಂಧನ ಬಾಕಿ ಇದ್ದು, ಸುರತ್ಕಲ್ ನಲ್ಲಿ ನಡೆದ ಫಾಯಿಲ್ ಹತ್ಯೆ ಆರೋಪಿಗಳ ಬಂಧನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸಂಜೆ ಆರು ಗಂಟೆಯ ಬಳಿಕ ಯಾವುದೇ ಅಂಗಡಿ ಮುಂಗಟ್ಟುಗಳು ವ್ಯಾಪಾರ ವಹಿವಾಟು ನಡೆಸದಂತೆ ಆದೇಶಿಸಲಾಗಿದೆ.
ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈಗಾಗಲೇ ಪ್ರವೀಣ್ ಹತ್ಯೆಯ ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಫಾಯಿಲ್ ಹತ್ಯೆ ಆರೋಪಿಗಳ ಪತ್ತೆ ಕಾರ್ಯಕ್ಕೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೂ, ರಾತ್ರಿ ವೇಳೆ ಸುತ್ತಾಡದಂತೆ ಈಗಾಗಲೇ ನಗರ ಪೊಲೀಸ್ ಕಮಿಷನರ್ ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಾಕಾಬಂದಿ ವಿಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಆಗಸ್ಟ್ ಒಂದರವರೆಗೆ ಈ ಆದೇಶ ಚಾಲ್ತಿಯಲ್ಲಿರಲಿದ್ದು, ಮುಂದಿನ ಆದೇಶದ ಬಳಿಕ ಎಂದಿನಂತೆ ವ್ಯಾಪಾರ ವಹಿವಾಟು ಮುಂದುವರಿಯಲಿದೆ ಎನ್ನಲಾಗಿದೆ.