ಆಗುಂಬೆ ಘಾಟಿಯಲ್ಲಿ ಭೂ ಕುಸಿತ | ವಾಹನ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ಆಗಸ್ಟ್ 31 ರ ವರೆಗೆ ನಿಷೇಧಿಸಲಾಗಿದೆ.

ಆದಾಗ್ಯೂ, ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಮನವಿ ಬರುತ್ತಿರುವುದರಿಂದ ಮತ್ತು ಈಗಾಗಲೇ ಭೂಕುಸಿತದಿಂದಾಗಿ ರಸ್ತೆ ಬದಿಯಲ್ಲಿ ಬಿದ್ದು ಹೋಗಿದ್ದ ಗಾರ್ಡ್ ವಾಲ್ ನ ಮರು ನಿರ್ಮಾಣ ಕಾರ್ಯ ಕೈಗೊಂಡಿದ್ದು ಸದ್ಯ ತಾತ್ಕಾಲಿಕ ದುರಸ್ತಿ ಮುಂದುವರಿದಿದ್ದು, ದುರಸ್ಥಿ ಸಂಪೂರ್ಣವಾಗಿ ಮುಗಿಯಲು ಎರಡು ವಾರಗಳ ಕಾಲಾವಧಿ ಬೇಕಾಗಿರುವುದರಿಂದ ಹಾಗೂ ಪ್ರಸ್ತುತ ಆಗುಂಬೆಯಲ್ಲಿ ಮಳೆಯಾಗುತ್ತಿದ್ದು ಮತ್ತೆ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಭಾರೀ ವಾಹನಗಳ ಸಂಚಾರಕ್ಕೆ 31-08-2022 ವರೆಗೆ ನಿಷೇಧ ಹೇರಲಾಗಿದ್ದು, ಲಘುವಾಹನ ಮತ್ತು ಬಸ್ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ಎಂ ರಾವ್ ಆದೇಶ ಹೊರಡಿಸಿದ್ದಾರೆ. ಆದೇಶ ಪ್ರತಿ ಈ ಕೆಳಗೆ ನೀಡಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: