ಪ್ರವೀಣ್ ನೆಟ್ಟಾರು ಮನೆಗೆ ಡಿ ವಿ ಸದಾನಂದ ಗೌಡ ಭೇಟಿ

ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ನಂತರ ಅನೇಕ ಪ್ರತಿನಿಧಿಗಳು ಮನೆಗೆ ಬಂದು ಕುಟುಂಬಸ್ಥರಿಗೆಲ್ಲಾ ಸಮಾಧಾನದ ಮಾತನ್ನು ಹೇಳಿದ್ದಾರೆ. ನಿನ್ನೆ ತೇಜಸ್ವಿ ಸೂರ್ಯ, ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ, ನಿಷ್ಪಕ್ಷಪಾತ ತನಿಖೆಯ ಭರವಸೆ ನೀಡಿದ್ದಾರೆ. ಇಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಭೇಟಿ ನೀಡಿದರು.

ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.


Ad Widget

Ad Widget

Ad Widget

Ad Widget

Ad Widget

Ad Widget

ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

error: Content is protected !!
Scroll to Top
%d bloggers like this: