KPSC : 72 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಲೋಕ ಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್ 2022 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08, ಸೆಪ್ಟೆಂಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 09, ಸೆಪ್ಟೆಂಬರ್ 2022

ಹುದ್ದೆ : ರೇಷ್ಮೆ ಕೃಷಿ ವಿಸ್ತರಣಾ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ : ಒಟ್ಟು 72 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ ‘ಬಿ’ಯ ಉಳಿಕೆ ವೃಂದದ ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಹುದ್ದೆ ಸ್ಥಳ : ಕರ್ನಾಟಕಾದ್ಯಂತ

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ರೇಷ್ಮೆ ಕೃಷಿ, ಕೃಷಿ ಅಥವಾ ತೋಟಗಾರಿಕೆಯಲ್ಲಿ ಪದವಿ, ರೇಷ್ಮೆ ಕೃಷಿಯಲ್ಲಿ ಸ್ನಾತಕೋತ್ತರ ಪದವಿ, ವಿಜ್ಞಾನದಲ್ಲಿ ಪದವಿ, ರೇಷ್ಮೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾವನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ : ಪ.ಜಾ, ಪ.ಪಂ ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಪ.ಜಾ, ಪ.ಪಂ ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335ರೂ.
ಸಾಮಾನ್ಯ ಅಭ್ಯರ್ಥಿಗಳು: 635 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.