ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ, ಮರು ಎಣಿಕೆಯ ಫಲಿತಾಂಶ ಪ್ರಕಟ

Share the Article

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ, ಮರು ಎಣಿಕೆಗೆ ಸಲ್ಲಿಸಲಾಗಿದ್ದಂತ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.

ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್, ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022ರಂದು ಪ್ರಕಟಿಸಲಾಗಿತ್ತು ಎಂದು ತಿಳಿಸಿದೆ.

ಮರು ಮೌಲ್ಯಮಾಪನಕ್ಕೆ ಮತ್ತು ಮರು ಎಣಿಕೆಗೆ ಅರ್ಜಿಯನ್ನು ಸಲ್ಲಿಸಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ. ಫಲಿತಾಂಶವನ್ನು ಇಲಾಖೆಯ ವೆಬ್ ಸೈಟ್ https://pue.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.

Leave A Reply