ತಮ್ಮ ತಿಂಗಳ ಸಂಬಳದ 5 ಲಕ್ಷ ರೂಪಾಯಿಯ ಚೆಕ್ ನೀಡಿದ ಕೇಂದ್ರ ಸಚಿವೆ ! ಪ್ರವೀಣ್ ನೆಟ್ಟಾರು ಕುಟುಂಬ ಭೇಟಿ ಮಾಡಿದ ಶೋಭಾ ಕರಂದ್ಲಾಜೆ, ನಾಗರಾಜ್ ಶೆಟ್ಟಿ
ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಐದು ದಿನಗಳ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಜು.31ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ನಂತರ ಶೋಭಾ ಕರಂದ್ಲಾಜೆಯವರು ತಮ್ಮ ಒಂದು ತಿಂಗಳ ಸಂಬಳ ಐದು ಲಕ್ಷ ರೂಪಾಯಿಗಳ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ನೀಡಿದ್ದಾರೆ.
ತಮಗೆ ನ್ಯಾಯಕೊಡಿಸುವಂತೆ ಇದೇ ವೇಳೆ ಪ್ರವೀಣ್ ಕುಟುಂಬಸ್ಥರು ಸಚಿವೆಯ ಮುಂದೆ ಕಣ್ಣೀರಿಟ್ಟಿದ್ದಾರೆ. ಅವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ಶೋ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ, ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ ಮನ್ಮಥ.ಎಸ್, ಬೆಳ್ಳಾರೆ ಗ್ರಾಂ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ, ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಮಾಜಿ ಎಪಿಯಂಸಿ ಸದಸ್ಯೆ ಪುಲಸ್ಯಾ.ರೈ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕು ಎಂದು ಕೋರಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.