ಬೆಂಗಳೂರು: “ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ.
ಇಂತಹ ಪೋಸ್ಟ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಪ್ರಾರಂಭಿಸುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ”. ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಈ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ಅಥವಾ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡುವುದರಿಂದ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಂದರೆಯಾಗಲಿದೆ ಎನ್ನುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
You must log in to post a comment.