ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್​​ ನೆಟ್ಟಾರ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಆರೋಪಿಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೆ ಬೆಂಗಳೂರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಬೆಳಗ್ಗೆ ಬೆಂಗಳೂರಿಗೆ ಪೋಲಿಸರ ತಂಡ ಭೇಟಿ ನೀಡಿದ್ದು, ಕಾರ್ಯಾಚರಣೆ ನಡೆಸಿದ್ದರು. ಬಳಿಕ ನಿನ್ನೆ ಮಧ್ಯರಾತ್ರಿ ಶಂಕಿತರು ಇದ್ದ ಮನೆ ಸುತ್ತುವರೆದು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಲ್ಲಿ ಇಬ್ಬರು ಆರೋಪಿಗಳು HRBR ಲೇಔಟ್​ನ ಮನೆಯೊಂದರಲ್ಲಿ ಪತ್ತೆಯಾಗಿದ್ದು, ಇಬ್ಬರನ್ನು ಕೂಡ ಸುಳ್ಯ ಪೊಲೀಸರು ಮಂಗಳೂರಿಗೆ ಕರೆದೊಯ್ದಿದ್ದಾರೆ.

ಆದರೆ, ಈ ಇಬ್ಬರು ಆರೋಪಿಗಳು ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಕೈ ಜೋಡಿಸಿದ್ದಾರಾ ಏನೂ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ. ಸಂಪೂರ್ಣ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬೀಳಲಿದೆ.

Leave A Reply