ಭಟ್ಕಳ : ಮನೆಯ ಮೇಲೆ ಕುಸಿದ ಗುಡ್ಡ ; ಮಣ್ಣಿನಡಿ ಸಿಲುಕಿದ ನಾಲ್ವರು

ಭಟ್ಕಳ : ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ನಷ್ಟಗಳೇ ಸಂಭವಿಸಿದೆ. ಹಲವು ಮನೆಯೊಳಗೆ ನೀರು ನುಗ್ಗಿ, ಹಾನಿಗೊಳಗಾಗಿದೆ. ಇದೀಗ ಇಂದು ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮಣ್ಣಿನಡಿ ಸಿಲುಕಿಕೊಂಡಿರುವ ಘಟನೆ ಮುಟ್ಟಳ್ಳಿಯಲ್ಲಿ ನಡೆದಿದೆ.

ಮಣ್ಣಿನಡಿಯಲ್ಲಿ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ನಾಯ್ಕ (20) ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮನೆಯ ಮೇಲೆ ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಕುಸಿದಿದ್ದು, ಮನೆ ಸಂಪೂರ್ಣ ನಾಶವಾಗಿದೆ. ಈ ವೇಳೆ ಮನೆಯೊಳಗಿದ್ದ ನಾಲ್ವರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದ್ದು, ಅಧಿಕಾರಿಗಳು ಭೇಟಿ ನೀಡಿದ್ದಾರೆ.

Leave A Reply