ಎಚ್ ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ ಘಟನೆ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಮಾಜಿ ಮುಖ್ಯಮಂತ್ರಿ ಎ.ಚ್.ಡಿ. ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ನಿವಾಸಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹೆಲಿಕಾಪ್ಟರ್‍ ಮೂಲಕ ತೆರಳಿದ್ದರು. ಇದೇ ವೇಳೆ ಅವರ ಬೆಂಗಾವಲು ಪೊಲೀಸರು ತಮ್ಮ ಕರ್ತವ್ಯ ಮುಗಿಸಿ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ತಿಪ್ಪೂರು ಗೇಟ್ ಬಳಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮೂವರು ಪೊಲೀಸ್​ ಸಿಬ್ಬಂದಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಲಿಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್​ ಎಂಬುವರು ಗಾಯಗೊಂಡಿದ್ದಾರೆ.

ಅಮೃತೂರು ವೃತ್ತ ನಿರೀಕ್ಷಕ ಅರುಣ್ ಸಾಲಂಕೆ, ಪಿಎಸ್‌ಐ ಮಂಗಳಗೌರಮ್ಮ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಸಿಬಂದಿಗಳ ಆರೋಗ್ಯ ವಿಚಾರಿಸಿದರು. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top
%d bloggers like this: