ರಾಷ್ಟ್ರೀಯ ಕೆಮಿಕಲ್ಸ್ ಫರ್ಟಿಲೈಜರ್ಸ್ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ | SSLC, ITI ಪಾಸಾದವರಿಗೆ ಆದ್ಯತೆ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇಡ್, ಟೆಕ್ನಿಷೀಯನ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿದೆ. ಆಸಕ್ತರು ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭ ದಿನಾಂಕ : 30-07-2022
ಆನ್‌ಲೈನ್ ಅರ್ಜಿಗೆ ಕೊನೆ ದಿನಾಂಕ: 14-08-2022

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ವಿವರ

ಅಕೌಂಟ್ಸ್ ಎಕ್ಸಿಕ್ಯೂಟಿವ್ : 51
ಸೆಕ್ರೇಟರಿಯಲ್ ಅಸಿಸ್ಟಂಟ್ : 69
ನೇಮಕಾತಿ ಎಕ್ಸಿಕ್ಯೂಟಿವ್ : 30

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ/ ಬಿಬಿಎ / ಇತರೆ ವಿಷಯದಲ್ಲಿ ಪದವಿ ಪಡೆದವರು ಅರ್ಜಿ
ಸಲ್ಲಿಸಬಹುದು.

ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ವಿವರ

ಕೆಮಿಕಲ್ : 30
ಸಿವಿಲ್ :  06
ಕಂಪ್ಯೂಟರ್ : 06
ಎಲೆಕ್ಟ್ರಿಕಲ್ : 20
ಇನ್‌ಸ್ಟ್ರುಮೆಂಟೇಶನ್ : 20
ಮೆಕ್ಯಾನಿಕಲ್: 28

ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮ ಇಂಜಿನಿಯರಿಂಗ್ ಅನ್ನು ಪಾಸ್ ಮಾಡಿರಬೇಕು.

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ : 136

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ವಿದ್ಯಾರ್ಹತೆ: ಬಿಎಸ್ಸಿ /
12th/10th/ITI ಪಾಸ್ ಆಗಿರಬೇಕು.

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಆಪರೇಟರ್, ಬ್ಯಾಕ್ಲರ್ ಅಟೆಂಡಂಟ್, ಹಾರ್ಟಿಕಲ್ಟರ್ ಅಸಿಸ್ಟಂಟ್, ಮಷಿನಿಸ್ಟ್, ಲ್ಯಾಬೋರೇಟರಿ ಅಸಿಸ್ಟಂಟ್, ವೆಲ್ಡರ್, ಮೆಕ್ಯಾನಿಕ್, ಹೌಸ್ಕೀಪರ್ ಹಾಸ್ಪಿಟಲ್, ಮೆಡಿಕಲ್ ಲ್ಯಾಬ್ ಟೆಕ್ನಿಷಿಯನ್, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಿಷಿಯನ್, ಇತರೆ.

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಐಟಿಐ, ಡಿಪ್ಲೊಮ, ಟೆಕ್ನಿಕಲ್ ಇಂಜಿನಿಯರಿಂಗ್ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಅರ್ಜಿ ಸಲ್ಲಿಸಲು ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು, ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಪಿಡಿಎಫ್ ಫೈಲ್ ಅನ್ನು ಕ್ಲಿಕ್ ಮಾಡಿ ಓದಿರಿ.

Leave A Reply

Your email address will not be published.