ಲಿಂಗಧಾರಣೆ ದೀಕ್ಷೆ ಪಡೆದ ರಾಹುಲ್ ಗಾಂಧಿ | ‘ಮುಂದಿನ ಪ್ರಧಾನಿ ರಾಹುಲ್ ಗಾಂಧಿ’ ಎಂದಾಗ ತಡೆದ ಮುರುಘಾ ಶ್ರೀಗಳು!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾವಣಗೆರೆಗೆ ಸಿದ್ದರಾಮೋತ್ಸವಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆ ಇಂದು ಬೆಳಗ್ಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದಾರೆ.

ಡಿ ಕೆ ಶಿವಕುಮಾ‌ರ್ ಸೇರಿದಂತೆ ಹಲವು ನಾಯಕರೊಂದಿಗೆ ರಾಹುಲ್ ಗಾಂಧಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಲಿಂಗಾಯತ ಸೆಮಿನಾರ್ ನಲ್ಲಿ ಹಾವೇರಿ ಹೊಸಮಠದ ಶ್ರೀಗಳು ಮಾತನಾಡುವಾಗ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದರು. ಆಗ ಮುರುಘಾ ಶ್ರೀಗಳು, ಮಧ್ಯೆ ತಡೆದು ನಮ್ಮ ಮಠಕ್ಕೆ ಯಾರೇ ಭೇಟಿ ನೀಡಿದರೂ ಅವರಿಗೆ ಆಶೀರ್ವಾದ ನೀಡುತ್ತೇವೆ ಎಂದು ಹೇಳಿದ ಘಟನೆ ನಡೆದಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಮುರುಘಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಅವರು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲಿಂಗದೀಕ್ಷೆ ನೀಡಿದ್ದಾರೆ. ಲಿಂಗದೀಕ್ಷೆ ಪಡೆದುಕೊಂಡ ನಂತರ ನಮಗೆ ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು ಎಂದು ಹೇಳಲಾಗಿದೆ‌.

ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದರು.

error: Content is protected !!
Scroll to Top
%d bloggers like this: