ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ | ಕನಿಷ್ಠ ವೇತನವನ್ನು ಜಾರಿಗೊಳಿಸಿದ ಸರ್ಕಾರ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು, ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ.

ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಯಾವುದೇ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಕೋಷ್ಟಕದಲ್ಲಿ ನಿರ್ದಿಷ್ಟ ಪಡಿಸಿರುವಂತ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ ಎಂದಿದ್ದಾರೆ.

ಈ ಕರಡು ಅಧಿಸೂಚನೆಗೆ ಸಲಹೆ, ಆಕ್ಷೇಪಣೆಗಳು, ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಮುಂದೆ ಮಂಡಿಸಲಾಗಿತ್ತು ಎಂದು ತಿಳಿಸಿದ್ದಾರೆ. ಈ ಹಿಂದಿನ ಎಲ್ಲಾ ಅಧಿಸೂಚನೆಗಳನ್ನು ರದ್ದುಪಡಿಸಿ, ಕರ್ನಾಟಕ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಅನ್ವಯವಾಗುವಂತೆ ಕನಿಷ್ಠ ವೇತನವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನದಲ್ಲಿ ಭಾರಿ ಹೆಚ್ಚಳವಾಗಲಿದ್ದು, ಆ ವೇತನ ಪರಿಷ್ಕರಣೆಯಂತೆ ವೇತನ ಸಿಗಲಿದೆ.

Leave A Reply

Your email address will not be published.