ಮಂಗಳೂರು : ಮತ್ತೆ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ನಡೆದಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳನ್ನು ಹಿಡಿದಿದ್ದ ಮೂವರ ತಂಡ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆ.3ರಂದು ಉಚ್ಚಿಲ ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ. ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾನ್ (49) ಎಂಬವರ ಮೇಲೆ ದಾಳಿಗೆ ಯತ್ನ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯು ಇಂದು ಬೆಳಿಗ್ಗೆ 7.30 ಗಂಟೆ ವೇಳೆಗೆ ನಡೆದಿದೆ ಸುದ್ದಿ ಬಂದಿದೆ. ಕಿಶೋರ್ ಅವರು ವೃತ್ತಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕೂಲಿ ಕೆಲಸಕ್ಕೆ ಹೊರಟು ಹೋಗುತ್ತಿದ್ದ ಸಮಯದಲ್ಲಿ ಮೂವರು ಆಗಂತುಕರು ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಕಿಶೋರ್ ಅವರು ಮನೆಯಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
You must log in to post a comment.