ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿಲ್ಲ -ಕಮೀಷನರ್ ಎನ್.ಶಶಿ ಕುಮಾರ್

1 69

ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ತಲ್ವಾರ್ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ ಎಂದು ಕೆಲವರು ಪ್ರಚಾರ ಪಡಿಸುತ್ತಿದ್ದು ಇದು ಸತ್ಯಕ್ಕೆ ದೂರವಾದ ಮಾತು ಎಂದು ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾನ್ (49) ಎಂಬವರ ಮೇಲೆ ದಾಳಿಗೆ ಯತ್ನ ನಡೆದಿದೆ ಎಂದು ಸುದ್ದಿ ಹಬ್ಬಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಿಷನರ್ ಅಂಥದ್ದೇನೂ ಇಲ್ಲ.ಆ ವ್ಯಕ್ತಿಯನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಯಾರೂ ದಾಳಿ ಮಾಡಿಲ್ಲ, ಬೆನ್ನಟ್ಟಿ ಬಂದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದು ಸುಳ್ಳು ಸುದ್ದಿ ಹಬ್ಬಿದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Leave A Reply