ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

Share the Article

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ.

ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ ಪಾಠ
ಮಾಡಲಾಗುತ್ತದೆ. ನೈತಿಕ ಪಾಠದ ಅಡಿಯಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ಕೂಡ ರಚನೆಯಾಗಲಿದೆ.

ಗುಜರಾತ್‌ನಲ್ಲಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ
ಭಗವದ್ಗೀತೆ ಪಾಠ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಪಠ್ಯ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ‌ಈ ಹಿನ್ನೆಲೆಯಲ್ಲಿ ಸಮಿತಿ ಕೂಡಾ ರಚನೆ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಈ ತಿಂಗಳ ಕೊನೆಯಲ್ಲಿ ಅಂತಿಮ ಪಠ್ಯದ ರೂಪುರೇಷೆ ಸಿದ್ದ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Leave A Reply