Big News | ಫಾಝಿಲ್ ಕೊಲೆ ಪ್ರಕರಣ : ಸತ್ಯ ಬಾಯ್ಬಿಟ್ಟ ಆರೋಪಿಗಳು
ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ. ಈ ಹಿನ್ನಲೆಯಲ್ಲಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿ ಪುರಸ್ಕರಿಸಿದ ನ್ಯಾಯಾಲಯ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ಹಲವಿಯು ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ಸುಹಾಸ್ ಶೆಟ್ಟಿ, ಮೋಹನ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ಮತ್ತು ಗಿರಿಧರ್ ಮಂಗಳೂರಿನ ಮತ್ತದರ ಆಸುಪಾಸಿನವರು.
ಇನ್ನು ಕಾರು ಮಾಲಕ ಅಜಿತ್ ಕ್ರಾಸ್ತಾ, ಹತ್ಯೆ ಬಳಿಕ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಯಬೇಕಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಆರೋಪಿಗಳನ್ನು ತಮ್ಮ ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ಆ.3ರಂದು ಬಿಗಿ ಭದ್ರತೆಯೊಂದಿಗೆ ಕೃತ್ಯ ನಡೆಸಲಾದ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಮಂಗಳೂರು ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿದೆ.ಕೊಲೆ ಆರೋಪದಲ್ಲಿ ಬಂಧಿತರಾದ ಹುಡುಗರು ಪೊಲೀಸ್ ವಿಚಾರಣೆಯ ವೇಳೆ ಎಲ್ಲಾ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯ ಆಗಿದೆ. ಆರೋಪಿಗಳು ಕೊಲೆಗೆ ಕಾರಣವನ್ನು ಹೇಳಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ಪೊಲೀಸರು ಅದನ್ನು ಪ್ರಕಟ ಪಡಿಸುವ ನಿರೀಕ್ಷೆ ಇದೆ.
ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರ ಶಂಕೆ ?
ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಪ್ರತೀಕಾರವಾಗಿಯೇ ಫಾಝಿಲ್ ಅವರನ್ನು ಕೊಲೆ ಮಾಡಿರುವುದಾಗಿ ಬಂಧಿತ ಆರೋಪಿಗಳು ವಿಚಾರಣೆ ವೇಳೆ ಬಾಯ್ದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಬಳಸಿರುವ ಕಾರು ಮಾಲಕ ಅಜಿತ್ ಕ್ರಾಸ್ತಾ ದು ಎನ್ನಲಾಗಿದೆ. ಹತ್ಯೆ ಬಳಿಕ ಕಾರನ್ನು ಬಿಟ್ಟು ಆರೋಪಿಗಳು ತಪ್ಪಿಸಿಕೊಳ್ಳಲು ಅವರಿಗೆ ಇನ್ನೊಂದು ಕಾರು ಯಾರಾದರೂ ನೀಡಿದ್ದಾರೆಯೇ ಎನ್ನುವ ಬಗ್ಗೆ ವಿಚಾರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಆರೋಪಿಗಳ ವಿಚಾರಣೆ ವೇಳೆ ಪೋಲಿಸರು ಈ ಎಲ್ಲಾ ಮಾಹಿತಿ ಕಲೆಹಾಕುವ ನಿರೀಕ್ಷೆ ಇದೆ.