ಭಾರೀ ಮಳೆ ಹಿನ್ನೆಲೆ : ರಾಜ್ಯದ ಈ ಜಿಲ್ಲೆಯ ಶಾಲೆಗೆ ಎರಡು ದಿನ ರಜೆ!!!

ಎಲ್ಲೆಡೆ ಬಿರುಸಿನ ಮಳೆ ಶುರುವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಯವರು ಚಾಮರಾಜನಗರ ಜಿಲ್ಲಾ ಪ್ರೌಢಶಾಲೆಗಳಿಗೆ ದಿನಾಂಕ 5-8-22 ರ ಶುಕ್ರವಾರ ಮತ್ತು 6-8-22 ಶನಿವಾರ ರಜೆ ಘೋಷಣೆ ಮಾಡಿರುತ್ತಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಸಹಿತ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆ, ಸೇತುವೆಗಳು ಹಾನಿಯಾಗಿದ್ದು ಹಲವು ಹಳ್ಳಿಗಳಿಗೆ ಸಂಪರ್ಕ ಕಡಿತಗೊಂಡಿದೆ. ಇನ್ನೂ ಎರಡು ದಿನಗಳ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೂರು ದಿನಗಳಿಂದ ಉದ್ಯಾನನಗರಿ ಬೆಂಗಳೂರಿನಲ್ಲಿ ಎಡಬಿಡದೆ ಹಗಲು-ರಾತ್ರಿಯ ಪರಿವೆ ಇಲ್ಲದೆ ಮಳೆ ಸುರಿಯುತ್ತಿದ್ದು, ನಗರದ ಜನತೆ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದಾರೆ.

Leave A Reply