ಅನ್ಯಧರ್ಮದ ಯುವಕನನ್ನು ಮದುವೆಯಾದ ಕಾರಣಕ್ಕೆ ಗರ್ಭಿಣಿ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ | ವೀಡಿಯೋ ವೈರಲ್

ತಾನು ಹೆತ್ತ ಮಗಳು ತನ್ನ ವಿರುದ್ಧಕ್ಕೆ ಹೋಗಿ ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂದು ತಂದೆಯೋರ್ವ ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆಯೊಂದು ನಡೆದಿದೆ. ಹೌದು. ಇದೊಂದು ಅಮಾನವೀಯ ಘಟನೆ ಎಂದೇ ಹೇಳಬಹುದು. ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಇದರ ಶಾಕಿಂಗ್ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

 

ಈ ಘಟನೆ ನಡೆದಿದ್ದು, ಭರತ್ಪುರದಲ್ಲಿ. ಯುವತಿ ತನ್ನ ಪತಿಯೊಂದಿಗೆ ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಆಕೆಯ ತಂದೆ ಡಿಕ್ಕಿ ಹೊಡೆಸಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಅವರಿಬ್ಬರೂ ದಿಕ್ಕಾಪಾಲಾಗಿ ಓಡಿದ್ದಾರೆ.

ಇವರಿಬ್ಬರ ಮದುವೆಯ ಸಮಯದಲ್ಲಿಯೂ ವಿರೋಧ ವ್ಯಕ್ತಪಡಿಸಿದ್ದ ಯುವತಿ ತಂದೆ ಈ ಹಿಂದೆ ಹಲ್ಲೆಗೆ ಯತ್ನಿಸಿದ್ದ ಎನ್ನಲಾಗಿದೆ. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದ್ದು ದಂಪತಿ ರಕ್ಷಣೆ ಕೋರಿದ್ದರು. ಇದರ ಮಧ್ಯೆ ಈಗ ಕೊಲೆ ಮಾಡಲು ಯತ್ನಿಸಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಮುಂದಾಗಿದ್ದಾರೆ.

Leave A Reply

Your email address will not be published.