ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-16, ಅರ್ಜಿ ಸಲ್ಲಿಸಲು ಕೊನೆ ದಿನ-ಆ.12

ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಮುಂದಾಗಿದ್ದು, ಇದೀಗ ಚೆನ್ನೈನಲ್ಲಿನ ಮೇಲ್ ಮೋಟಾರ್ ಸರ್ವಿಸ್ ವಿಭಾಗದ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 16


Ad Widget

Ad Widget

Ad Widget

Ad Widget

Ad Widget

Ad Widget

ಶೈಕ್ಷಣಿಕ ಅರ್ಹತೆ;
10ನೇ ತರಗತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಬಳಿ ಭಾರೀ ಮೋಟಾರು ವಾಹನ, ಲಘು ಮೋಟಾರು ವಾಹನ ಪರವಾನಗಿ ಇರುವುದು ಕಡ್ಡಾಯವಾಗಿದೆ. ಹಾಗೆಯೇ ಮೂರು ವರ್ಷಗಳ ಚಾಲನಾ ಅನುಭವ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ 56 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅಧಿಕೃತ ವೆಬ್ ಸೈಟ್ ನಿ ಲಿಂಕ್​ ಅನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಿ. ಬಳಿಕ ಆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ:
O/o the Senior Manager (JAG), Mail Motor Service, No 37, Greams Road, Chennai 600 006

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 12, 2022

ಅಧಿಕೃತ ವೆಬ್ ಸೈಟ್ : indiapost.gov.in

error: Content is protected !!
Scroll to Top
%d bloggers like this: