ಮಂಗಳೂರು:ಹಳಸಿದ ಅನ್ನ ನೀಡಿರುವ ಆರೋಪ!!ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರ ನಡುವೆ ವಾಗ್ವಾದ!!

ಮಂಗಳೂರು: ಸರಣಿ ಹತ್ಯೆಯಿಂದ ಉದ್ವಿಗ್ನ ಸ್ಥಿತಿಗೆ ತಲುಪಿದ್ದ ದಕ ಜಿಲ್ಲೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ನಡುವೆ ಊಟದ ವಿಚಾರಕ್ಕೆ ವಾಗ್ವಾದ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ.

ಚಿಕಮಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಬಂದೋಬಸ್ತ್ ಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಸುರತ್ಕಲ್ ಬಂಟರ ಭವನದಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಹೀಗೆ ವಾಸ್ತವ್ಯ ಹೂಡಿದ್ದ ಸಿಬ್ಬಂದಿಗಳಿಗೆ ಸುರತ್ಕಲ್ ಠಾಣಾ ಸಿಬ್ಬಂದಿಯೊಬ್ಬರು ಊಟ ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಈ ಸಂದರ್ಭ ಹಳಸಿದ ಅನ್ನ ತಂದಿದ್ದಾರೆ ಎಂದು ಚಿಕ್ಕಮಗಳೂರಿನ ಸಿಬ್ಬಂದಿಯೊಬ್ಬರು ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ವಿಚಾರ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಹಿರಿಯ ಅಧಿಕಾರಿಗಳು, ಎಲ್ಲಾ ಸಿಬ್ಬಂದಿಗಳಿಗೂ ಉತ್ತಮ ಗುಣಮಟ್ಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲರಿಗೂ ಒಂದೇ ರೀತಿಯ ಊಟ ನೀಡಲಾಗಿದೆ ಎಂದರು.

error: Content is protected !!
Scroll to Top
%d bloggers like this: