ಮುಲ್ಕಿ:ಕಾಲೇಜು ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ!! ಹೊರಗಿನ ದುಷ್ಕರ್ಮಿಗಳು ಭಾಗಿಯಾಗಿರುವ ಶಂಕೆ-ಓರ್ವ ಆಸ್ಪತ್ರೆಗೆ

ಮುಲ್ಕಿ:ಕಾಲೇಜ್ ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು,ಹತ್ತಕ್ಕೂ ಹೆಚ್ಚು ಮಂದಿಯಿಂದ ಓರ್ವನ ಮೇಲೆ ಹಲ್ಲೆ ನಡೆದ ಘಟನೆಯೊಂದು ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಹಲ್ಲೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಕಾಲೇಜು ಡೇ ಕಾರ್ಯಕ್ರಮದಂದೇ ಹಳೇ ವಿಚಾರದ ಬಗ್ಗೆ ಎರಡು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿಗಳ ಜಗಳಕ್ಕೆ ಒಂದು ಗುಂಪಿನ ಪರವಾಗಿ ಹೊರಗಿನ ದುಷ್ಕರ್ಮಿಗಳು ಕೈಜೋಡಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಪರಸ್ಪರ ಹಲ್ಲೆ ನಡೆದಿದ್ದು, ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಸೇರಿಕೊಂಡು ಕಾಲೇಜಿನ ವಿದ್ಯಾರ್ಥಿ ಸುಜನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಸುಜನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.