BREAKING NEWS : ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ

ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಗದ್ದುಗೆ ಏರಿದ್ದಾರೆ.

ಜಗದೀಪ್ ಧನಕರ್ ( 71 ವರ್ಷ) ಅವರು 1951 ರ ಮೇ.18 ರಂದು ರಾಜಸ್ಥಾನದ ಜುಂಝುನು ಜಿಲ್ಲೆಯಲ್ಲಿ ಕಿತಾನಾ ಗ್ರಾಮದ ರೈತಾಪಿ ಕುಟುಂಬದಲ್ಲಿ ಜನಿಸಿದರು. 1989ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ರಾಜಸ್ಥಾನದ ಜುಂಝುನು ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ, ಗೆಲುವು ಕಂಡರು. ನಂತ್ರ ಪಿವಿ ನರಸಿಂಹ ರಾವ್ ಅವ್ರು ಪ್ರಧಾನಿಯಾದ ಬಳಿಕ ಕಾಂಗ್ರೆಸ್ ಸೇರ್ಪಡೆಯಾದರು. 1993ರಲ್ಲಿ ಕಿಶನ್‌ಗಡ ಕ್ಷೇತ್ರದಿಂದ ರಾಜಸ್ಥಾನದ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾದರು. ನಂತ್ರ ಅಶೋಕ್ ಗೆಹ್ಲಟ್ ಅಧಿಕಾರಕ್ಕೆ ಬಂದ್ಮಲೆ ಅಂದ್ರೆ 2008ರಲ್ಲಿ ಬಿಜೆಪಿಗೆ ಸೇರ್ಪಡೆಯಾದ್ರು. ಇನ್ನು 2019ರ ಜುಲೈ 30ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧನಕರ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರನ್ನಾಗಿ ನೇಮಿಸಿದರು.

Leave A Reply

Your email address will not be published.