ಮದ್ಯ ಪ್ರಿಯರೇ ನಿಮಗೊಂದು ಶಾಕಿಂಗ್ ನ್ಯೂಸ್: ಈ ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ
ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್ ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ವಿಜಯನಗರ ಜಿಲ್ಲೆಯಾದ್ಯಂತ ಆ.07ರಂದು ಬೆಳಗ್ಗೆ 6ರಿಂದ ಆ.10ರ ರಾತ್ರಿ 10ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಆದೇಶಿಸಿದ್ದಾರೆ.
ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಇಲಾಖೆಯ ಅಬಕಾರಿ ಉಪ ಆಯುಕ್ತರು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಅಷ್ಟು ಮಾತ್ರವಲ್ಲದೇ ಧಾರವಾಡ ಜಿಲ್ಲೆಯಾದ್ಯಂತ ಆಗಸ್ಟ್ 8 ರ ಸಂಜೆ 6 ಗಂಟೆಯಿಂದ ಆಗಸ್ಟ್ 10 ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಮದ್ಯಪಾನ, ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.