ಪುತ್ತೂರು ಗ್ರಾಮಾಂತರ ಸಿಪಿಐ ಆಗಿ ರವಿ ಬಿ.ಎಸ್

Share the Article

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಚೇರಿ ಹೊಂದಿರುವ ಸಂಪ್ಯ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯನ್ನು ಹೊಂದಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ (ಸಿ.ಪಿ.ಐ.) ಆಗಿ ರವಿ ಬಿ.ಎಸ್. ಇವರಿಗೆ ವರ್ಗಾವಣೆ ಆದೇಶ ಆಗಿದೆ.

ಬಿ.ಎಸ್. ರವಿಯವರು ಪ್ರಸಕ್ತ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ఆగి ಕೆಲಸ ನಿರ್ವಹಿಸುತ್ತಿದ್ದು, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಚೇರಿಯಿಂದ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ.

Leave A Reply

Your email address will not be published.