ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ನೀಡಿದ್ದು, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಈ ಪೂರಕ ಪರೀಕ್ಷೆಗಾಗಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ದಿನಾಂಕ 05-08-2022ರಂದು ಸ್ಯಾಟ್ ಪೋರ್ಟಲ್ ನ ಪ್ರಾಚಾರ್ಯರ ಲಾಗಿನ್ ನಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರುಗಳು ಪ್ರವೇಶ ಪತ್ರಗಳನ್ನು ಡೌನ್ ಲೋಟ್ ಮಾಡಿಕೊಂಡು, ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಿದ್ದಾರೆ.

Leave A Reply

Your email address will not be published.